ಆದ್ಯೋತ್ ಸುದ್ದಿನಿಧಿ:
ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರುವತ್ತಿ ಸಮೀಪದ ಹೊಸಳ್ಳಿಯ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಗುರುವಾರ ಸಂಜೆ ಲಾರಿ-ಕಾರು ಮುಖಾಮುಖಿ ಡಿಕ್ಕಿ ಹೊಡೆದ ಕಾರಣ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೆ ಮರಣ ಹೊಂದಿದ್ದಾರೆ.
ಡೆಲ್ಲಿ ಪಾಸಿಂಗ್ ಇರುವ ಕೆಂಪು ಕಾರು ಎದುರಿನಿಂದ ಬರುತ್ತಿರುವ ಲಾರಿಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಅಪಘಾದಲ್ಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರ ಇದ್ದಾರೆ ಎಂದು ಪ್ರತ್ಯಕ್ಚ ದರ್ಶಿಗಳು ತಿಳಿಸಿದ್ದಾರೆ. ಮೂವರು 40 ವರ್ಷದ ಒಳಗಿನವರಾಗಿದ್ದು ಒಬ್ಬ ಮಹಿಳೆ ವೃದ್ಧರಾಗಿದ್ದಾರೆ ಎನ್ನಲಾಗಿದೆ.
ಕಾರಿನಲ್ಲಿದ್ದವರು ಉತ್ತರ ಭಾರತದಿಂದ ದಕ್ಷಿಣ ಭಾರತಕ್ಕೆ ಪ್ರವಾಸ ಹೊರಟಿದ್ದರು ಎನ್ನಲಾಗುತ್ತಿದೆ. ಹೆಚ್ಚಿನ ಮಾಹಿತಿಗಳು ಬರಬೇಕಿದೆ.
ಸ್ಥಳಕ್ಕೆ ಯಲ್ಲಾಪುರ ಪೊಲೀಸ್ ಠಾಣೆಯ ಸಿಪಿಐ ಸುರೇಶ ಯೆಳ್ಳೂರು,ಪಿ.ಎಸ್.ಐ.ಮಂಜುನಾಥ ಗೌಡರ್ ಭೇಟಿ ನೀಡಿ ಸಾವನ್ನಪ್ಪಿದವರ ಶವಗಳನ್ನು ಆಸ್ಪತ್ರೆಗೆ ಸಾಗಿಸುವ ಕಾರ್ಯದಲ್ಲಿದ್ದಾರೆ ಎಂದು ತಿಳಿದು ಬಂದಿದೆ.
.